HomeKarnatakaಚೆನ್ನಮ್ಮ ದೇವೇಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಚೆನ್ನಮ್ಮ ದೇವೇಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಉಸಿರಾಟ ತೊಂದರೆಯಿಂದ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದಾರೆ.

ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದ ಸುದ್ದಿ ತೀವ್ರ ಆಘಾತ ಮತ್ತು ನೋವುಂಟು ಮಾಡಿದೆ. ಸಮಾಜ ಸೇವೆಯ ಮೇಲಿದ್ದ ಅವರ ಅಪಾರ ಕಾಳಜಿ, ಅವರ ವಿನಮ್ರ ಸ್ವಭಾವ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು. ಈ ದುಃಖದ ಸಮಯದಲ್ಲಿ ಕುಟುಂಬದವರ ನೋವಿನಲ್ಲಿ ಭಾಗಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

‘ಮಾಜಿ ಪ್ರಧಾನಿ ಶ್ರೀ ದೇವೇಗೌಡರ ಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರ ವಿನಮ್ರತೆ ಮತ್ತು ಸಮಾಜ ಸೇವೆಯ ಬಗ್ಗೆ ಅವರ ಉತ್ಸಾಹ ಮೆಚ್ಚುವಂತಹದ್ದಾಗಿತ್ತು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಶ್ರೀ ದೇವೇಗೌಡರ ಮತ್ತು ಅವರ ಇಡೀ ಕುಟುಂಬದೊಂದಿಗೆ ಇವೆ. ಓಂ ಶಾಂತಿ.’ ಎಂದು ಪ್ರಧಾನಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/narendramodi/status/2078485223055225030

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular