‘ಆತ್ಮೀಯ ಸ್ನೇಹಿತನಿಗೆ ಅಭಿನಂದನೆ’ ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟ್ರಂಪ್ ಗೆ ಪ್ರಧಾನಿ ಮೋದಿ ಶುಭಹಾರೈಕೆ

ನವದೆಹಲಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ, ಅಮೆರಿಕದ ರಾಜಧಾನಿಯನ್ನು ತೊರೆದ ನಾಲ್ಕು ವರ್ಷಗಳ ನಂತರ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದ್ದಾರೆ ಎಂದು ಪ್ರಧಾನಿ ಮೋದಿ ‘X’ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

“ಅಮೆರಿಕದ 47ನೇ ಅಧ್ಯಕ್ಷರಾಗಿ ನಿಮ್ಮ ಐತಿಹಾಸಿಕ ಅಧಿಕಾರ ಸ್ವೀಕಾರಕ್ಕಾಗಿ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆಗಳು! ನಮ್ಮ ಎರಡೂ ದೇಶಗಳಿಗೆ ಪ್ರಯೋಜನವಾಗಲು ಮತ್ತು ಜಗತ್ತಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಮತ್ತೊಮ್ಮೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಮುಂಬರುವ ಯಶಸ್ವಿ ಅವಧಿಗೆ ಶುಭಾಶಯಗಳು! ಎಂದು X ನಲ್ಲಿ ಅವರ ಪೋಸ್ಟ್ ನಲ್ಲಿ ಬರೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read