HomeKarnatakaBREAKING NEWS: ಮೋದಿ ವಿರುದ್ಧ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; 'ಕೈ' ಕಾರ್ಯಕರ್ತರು ಪೊಲೀಸ್ ವಶಕ್ಕೆ

BREAKING NEWS: ಮೋದಿ ವಿರುದ್ಧ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; ‘ಕೈ’ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುವ ಮೂಲಕ ಚೊಂಬು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಹಾಗೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲಿಸರು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular