HomeIndiaBREAKING: 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥಾಯ್ಲೆಂಡ್ ಗೆ ತೆರಳಿದ ಪ್ರಧಾನಿ ಮೋದಿ: ಇಂದಿನಿಂದ...

BREAKING: 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥಾಯ್ಲೆಂಡ್ ಗೆ ತೆರಳಿದ ಪ್ರಧಾನಿ ಮೋದಿ: ಇಂದಿನಿಂದ 4 ದಿನ ಥಾಯ್ಲೆಂಡ್, ಶ್ರೀಲಂಕಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರದಿಂದ 4 ದಿನಗಳ ಕಾಲ ಥಾಯ್ಲೆಂಡ್ ಮತ್ತು ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ.

ಏಪ್ರಿಲ್ 3, 4 ರಂದು ಥಾಯ್ಲೆಂಡ್ ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಬಿಮ್ ಸ್ಟೆಕ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರು ಥಾಯ್ಲೆಂಡ್ ಗೆ ನೀಡುತ್ತಿರುವ ಮೂರನೇ ಭೇಟಿಯಾಗಿದೆ.

ತಮ್ಮ ಈ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಥಾಯ್ಲೆಂಡ್ ಪ್ರಧಾನಿ ಪೆಂಟೊಗ್ಟರ್ನ್ ಶಿನಾವಾತ್ರಾ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ. ಇದರೊಂದಿಗೆ 6ನೇ ಬಿಮ್ ಸ್ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿ ಸದಸ್ಯ ರಾಷ್ಟ್ರಗಳೊಂದಿಗೆ ಕಡಲ ಸಹಕಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮ್ಮೇಳನದಲ್ಲಿ ಮೋದಿ ಅವರು ನೇಪಾಳ ಪ್ರಧಾನಿ ಕೆ.ಪಿ. ಓಲಿ ಶರ್ಮಾ, ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಯೂನಸ್ ಅವರನ್ನು ಕೂಡ ಭೇಟಿಯಾಗಲಿದ್ದಾರೆ.

ಏಪ್ರಿಲ್ 5 ಮತ್ತು 6 ರಂದು ಪ್ರಧಾನಿ ಮೋದಿ ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ರಾಮೇಶ್ವರಂಗೆ ಆಗಮಿಸಲಿರುವ ಅವರು ಪಾಂಬನ್ ರೈಲು ಸೇತುವೆ ಉದ್ಘಾಟಿಸಲಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular