BIG NEWS: ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಬೆನ್ನಲ್ಲೇ ವಿಧಾನಸಭೆ ಚುನಾವಣೆ ಘೋಷಣೆ…?

ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಆಗಮಿಸಲಿದ್ದಾರೆ., ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.

ದಾವಣಗೆರೆ ಹೊರವಲಯದಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಜಿಎಂಐಟಿ ಕಾಲೇಜು ಸಮೀಪದ 400 ಎಕರೆ ಪ್ರದೇಶದಲ್ಲಿ ಮಹಾಸಂಗಮ ಆಯೋಜಿಸಲಾಗಿದೆ. ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಮಹಾಸಂಗಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 30ಕ್ಕೂ ಹೆಚ್ಚು ಜೆಸಿಬಿ ಗಳಿಂದ ಸಮಾವೇಶದ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.

ಮಹಾಸಂಗಮ ಸಮಾವೇಶದ ನಂತರ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಮಾರ್ಚ್ 25ರ ನಂತರ ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು.

ದಾವಣಗೆರೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಮಹಾಸಂಗಮ ಕಾರ್ಯಕ್ರಮದ ಸಿದ್ಧತೆ ಕೈಗೊಳ್ಳಲಾಗಿದ್ದು, ಸಮಾರೋಪ ಮುಗಿದ ನಂತರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read