ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ವಿಜಯಪುರ: ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ನಿಧನರಾಗಿ 2024ರ ಜನವರಿ 2ಕ್ಕೆ 1 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರಿಗೆ ಜ್ಞಾನ ಯೋಗಾಶ್ರಮದ ಸ್ವಾಮೀಜಿ ಆಹ್ವಾನ ನೀಡಿದ್ದಾರೆ.

ಗುರುನಮನ ಕಾರ್ಯಕ್ರಮದ ರೂಪರೇಷೆ ಕುರಿತು ಚರ್ಚೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗುರುನಮನ ಕಾರ್ಯಕ್ರಮ ಆಯೋಜನೆ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕುರಿತಾಗಿ ಪರಿಶೀಲನೆ ನಡೆಸಿದ ಅವರು, ಗುರುನಮನದ ಮೂಲಕ ಸಿದ್ದೇಶ್ವರ ಶ್ರೀಗಳ ಸ್ಮರಣೆ, ವಿವಿಧ ಕಾರ್ಯಕ್ರಮ ಆಯೋಜಿಸಿದ್ದು, ಪ್ರಧಾನಮಂತ್ರಿಯವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 2ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಡಿಸೆಂಬರ್ 21ರಿಂದ 31ರವರೆಗೆ ವಿಶೇಷ ಗೋಷ್ಠಿ ಆಯೋಜಿಸಲಾಗಿದೆ. ಸಿದ್ದೇಶ್ವರ ಶ್ರೀಗಳ ಆಶಯಕ್ಕೆ ಧಕ್ಕೆ ಆಗದಂತೆ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read