HomeKarnatakaಪ್ರಧಾನಿ ಮೋದಿ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಿಸಿ ಕನ್ನಡಿಗರೆಲ್ಲರೂ ತಲೆತಗ್ಗಿಸುವಂತೆ ಮಾಡಿದ್ದಾರೆ: ಸಿದ್ಧರಾಮಯ್ಯ

ಪ್ರಧಾನಿ ಮೋದಿ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಿಸಿ ಕನ್ನಡಿಗರೆಲ್ಲರೂ ತಲೆತಗ್ಗಿಸುವಂತೆ ಮಾಡಿದ್ದಾರೆ: ಸಿದ್ಧರಾಮಯ್ಯ

ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಲ್ಹಾದ್ ಜೋಶಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಿರ್ಗಮಿತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗಿಂತ ಪ್ರಹ್ಲಾದ್ ಜೋಶಿ ಅವರು ಯಾವುದೇ ರೀತಿ ಭಿನ್ನರಲ್ಲ, ಇವರಿಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು. ಮಹಿಳೆಯರು, ದಲಿತರು, ಬಡವರು, ಹಿಂದುಳಿದ ಜಾತಿಗಳು ಮತ್ತು ಮುಸ್ಲಿಂ – ಕ್ರಿಶ್ಚಿಯನರ ಬಗ್ಗೆ ಆರ್.ಎಸ್.ಎಸ್ ಹೊಂದಿರುವ ಅಭಿಪ್ರಾಯವನ್ನೇ ಹೊಂದಿದವರು. ಇದಕ್ಕಾಗಿಯೇ ಪ್ರಧಾನ್ ಅವರ ಸ್ಥಾನಕ್ಕೆ ಜೋಶಿ ಅವರನ್ನು ತಂದು ಕೂರಿಸಲಾಗಿದೆ. ಇದೊಂದು ರೀತಿ ಊದುವುದನ್ನು ಕೊಟ್ಟು ಬಾರಿಸುವುದನ್ನು ಕೊಂಡು ಬಂದಂತೆ. ಬದಲಾಗಿದ್ದು ಪಾತ್ರಧಾರಿ ಅಷ್ಟೆ, ಸೂತ್ರಧಾರಿಗಳಾದ ಆರ್.ಎಸ್.ಎಸ್ ನ ನಿರ್ದೇಶನದಂತೆ ಇವರೂ ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗುಜರಾತ್ ಗಲಭೆಯ ಕಾಲದಲ್ಲಿ ಬಿಲ್ಕಿಸ್ ಭಾನು ಎಂಬ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರಿಗಳನ್ನು 2022ರಲ್ಲಿ ಗುಜರಾತ್ ಸರ್ಕಾರ ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿದ್ದನ್ನು ಪ್ರಹ್ಲಾದ ಜೋಶಿ ಅವರು ಸಮರ್ಥಿಸಿ ಅತ್ಯಾಚಾರಿಗಳ ಪರವಾಗಿ ಮಾತನಾಡಿದ್ದರು. ಇಂತಹವರು ಶಿಕ್ಷಣ ಸಚಿವರಾದರೆ ದೇಶದ ಶಿಕ್ಷಣ ವ್ಯವಸ್ಥೆಯ ಗತಿ ಏನಾಗಬಹುದು ಎನ್ನುವುದು ನಮ್ಮೆಲ್ಲರ ಈಗಿನ ಆತಂಕ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆಯಲ್ಲಿ ಪ್ರಹ್ಲಾದ್ ಜೋಶಿ ಅವರ ಮುಖವಾಡವನ್ನು ಕಿತ್ತೊಗೆದು ದೇಶದ ಮುಂದೆ ನಿಲ್ಲಿಸಿದ್ದಾರೆ. ಸದನದಲ್ಲಿ ಅವರ ಬಾಯಿ ಮುಚ್ಚಿಸಬಹುದು, ಆದರೆ ದೇಶದ ಕೋಟ್ಯಂತರ ಜನರ ಬಾಯಿ ಮುಚ್ಚುವುದು ಸಾಧ್ಯ ಇಲ್ಲ ಎಂದು ಹೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ಹಾದಿಯಲ್ಲಿಯೇ ಜೋಶಿ ಅವರು ಹೊರಡುವುದಕ್ಕೆ ಬಹಳ ದಿನಗಳು ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದಿಷ್ಟು ಕಾಳಜಿ ಹೊಂದಿದ್ದರೆ ತಕ್ಷಣ ಶಿಕ್ಷಣ ಖಾತೆಯನ್ನು ಜೋಷಿ ಅವರಿಂದ ಕಿತ್ತುಕೊಂಡು, ಯಾರಾದರೂ ಅರ್ಹರಿದ್ದರೆ ಅಂತವರಿಗೆ ಈ ಮಹತ್ವದ ಖಾತೆಯ ಹೊಣೆ ವಹಿಸಿ ಕೊಡಬೇಕು ಎಂದು ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular