ನವದೆಹಲಿ: ಭಾರತ-ಪಾಕಿಸ್ತಾನ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿದ್ದಾರೆ.
ಪಾಕಿಸ್ತಾನದ ಡ್ರೋನ್ ದಾಳಿಯನ್ನು ಭಾರತ ಯಶಸ್ವಿಯಾಗಿ ವಿಫಲಗೊಳಿಸಿದ ಒಂದು ದಿನದ ನಂತರ, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಭದ್ರತಾ ಪರಿಶೀಲನಾ ಸಭೆ ನಡೆಸಿದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಹಾಜರಿದ್ದರು.
ಇದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಇಂದು ಸಶಸ್ತ್ರ ಪಡೆಗಳ ಮಾಜಿ ಯೋಧರ ಗುಂಪನ್ನು ಭೇಟಿಯಾದರು. ಪ್ರಸ್ತುತ ಪರಿಸ್ಥಿತಿಯ ಕುರಿತು ವಿವಿಧ ವಿಷಯಗಳ ಕುರಿತು ಪ್ರಧಾನಿ ಮಾಜಿ ಯೋಧರೊಂದಿಗೆ ವ್ಯಾಪಕ ಸಂವಾದ ನಡೆಸಿದರು
ಇದರಲ್ಲಿ ಮಾಜಿ ವಾಯುಪಡೆ ಮುಖ್ಯಸ್ಥರು, ಸೇನಾ ಮುಖ್ಯಸ್ಥರು, ನೌಕಾಪಡೆಯ ಮುಖ್ಯಸ್ಥರು ಮತ್ತು ದೇಶಕ್ಕೆ ವ್ಯಾಪಕವಾಗಿ ಸೇವೆ ಸಲ್ಲಿಸಿದ ಇತರ ಮಾಜಿ ಯೋಧರು ಭಾಗವಹಿಸಿ ಸಲಕೆ ನೀಡಿದ್ದಾರೆ.