HomeKarnataka12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

ಹುಬ್ಬಳ್ಳಿ: 12 ವರ್ಷದ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಂದು ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇಂದು ಕಳೆದ 25 ವರ್ಷಗಳಿಂದ ಕೇಂದ್ರ ಯುವ ಜನಸೇವೆ, ಕ್ರೀಡಾ ಸಚಿವಾಲಯ ಯುವಜನೋತ್ಸವ ಆಯೋಜಿಸುತ್ತಿದೆ. ಈ ಬಾರಿ ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2012ರಲ್ಲಿ ಒಂದು ದಿನದ ಯುವಜನೋತ್ಸವ ಮಂಗಳೂರಿನಲ್ಲಿ ನಡೆದಿತ್ತು. ಹುಬ್ಬಳ್ಳಿಯಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಐದು ದಿನದ ಕಾರ್ಯಕ್ರಮಗಳು ಧಾರವಾಡದಲ್ಲಿ ಜರುಗಲಿವೆ. 7500 ಪ್ರತಿನಿಧಿಗಳು, 40,000ಕ್ಕೂ ಅಧಿಕ ಯುವ ಜನರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ಧಾರವಾಡದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular