HomeKarnatakaBREAKING : ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ 'ವಿವೇಕ ಸ್ಮಾರಕ' ಉದ್ಘಾಟಿಸಿದ ಪ್ರಧಾನಿ ಮೋದಿ |WATCH VIDEO

BREAKING : ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ |WATCH VIDEO

ಮೈಸೂರು : 1892ರಲ್ಲಿ ಮೈಸೂರಿಗೆ ಸ್ವಾಮಿ ವಿವೇಕಾನಂದರು ಭೇಟಿ ನೀಡಿದ್ದ ಸ್ಥಳ ಇದೀಗ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ-ವಿವೇಕ ಸ್ಮಾರಕವಾಗಿ ನಿರ್ಮಾಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈ ಸ್ಮಾರಕವನ್ನು ಉದ್ಘಾಟನೆ ಮಾಡಿದ್ದಾರೆ.ರಾಮಕೃಷ್ಣ ಆಶ್ರಮದಲ್ಲಿ ನೂತನವಾಗಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ)ವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ್ದಾರೆ.

ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.

ಆಂಧ್ರಪ್ರದೇಶದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ಮೈಸೂರಿಗೆ ಆಗಮಿಸಿದ ಪ್ರಧಾನಿಯನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸ್ವಾಗತಿಸಿದರು. ಬಳಿಕ ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗವಾಗಿ ಕಾರ್ಯಕ್ರಮ ಸ್ಥಳಕ್ಕೆ ತೆರಳಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ವಿವೇಕ ಸ್ಮಾರಕ ಉದ್ಘಾಟನೆಯೊಂದಿಗೆ ಮೈಸೂರಿಗೆ ಮತ್ತೊಂದು ರಾಷ್ಟ್ರೀಯ ಮಹತ್ವದ ಸಾಂಸ್ಕೃತಿಕ ಕೇಂದ್ರ ಸೇರ್ಪಡೆಯಾಗಿದ್ದು, ಯುವಜನರಿಗೆ ಪ್ರೇರಣೆಯ ಕೇಂದ್ರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರ 1892ರ ಐತಿಹಾಸಿಕ ಭೇಟಿಯ ನೆನಪಿಗಾಗಿ ನಿರ್ಮಿಸಲಾದ ‘ವಿವೇಕ ಸ್ಮಾರಕ’ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 1, 2026 ರಂದು ಉದ್ಘಾಟಿಸಿದರು. ಇದು ಯುವಜನರಿಗೆ ಸ್ಪೂರ್ತಿ ನೀಡುವ ಕೇಂದ್ರವಾಗಿದೆ.

ಸ್ಮಾರಕದ ಪ್ರಮುಖ ವಿಶೇಷತೆಗಳು
• ಸ್ಥಳ: ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರು ಹಿಂದೆ ಉಳಿದುಕೊಂಡಿದ್ದ ಐತಿಹಾಸಿಕ ಸ್ಥಳ.
• ಸೌಲಭ್ಯಗಳು: ತರಗತಿ ಕೊಠಡಿಗಳು, ಗ್ರಂಥಾಲಯ, ಧ್ಯಾನ ಮಂದಿರ ಮತ್ತು ಯೋಗ ಮಂದಿರಗಳನ್ನು ಹೊಂದಿದೆ.
• ಉದ್ದೇಶ: ಯುವ ಜನರಿಗೆ ಸ್ವಾಮಿ ವಿವೇಕಾನಂದರ ವಿಚಾರಗಳು ಹಾಗೂ ಆದರ್ಶಗಳನ್ನು ತಲುಪಿಸುವುದು

ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರು ವಾಸ್ತವ್ಯ ಹೂಡಿದ್ದ ಪವಿತ್ರ ಸ್ಥಳದಲ್ಲೇ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಯುವಜನರಲ್ಲಿ ನೈತಿಕತೆ, ಜೀವನ ಕೌಶಲ್ಯ, ಭಾರತೀಯ ಸಂಸ್ಕೃತಿ ಹಾಗೂ ವ್ಯಕ್ತಿತ್ವ ವಿಕಾಸವನ್ನು ಬೆಳೆಸುವ ಉದ್ದೇಶದಿಂದ ಈ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ.

ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ಸಂದೇಶವನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಈ ಸಾಂಸ್ಕೃತಿಕ ಯುವ ಕೇಂದ್ರವು, ರಾಷ್ಟ್ರ ನಿರ್ಮಾಣಕ್ಕೆ ಅಗತ್ಯವಾದ ಮೌಲ್ಯಾಧಾರಿತ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಒತ್ತು ನೀಡಲಿದೆ. ಶ್ರೀ ರಾಮಕೃಷ್ಣ ಆಶ್ರಮದ ನಿರ್ವಹಣೆಯಲ್ಲಿರುವ ಈ ಕೇಂದ್ರವು ಯುವಕರಿಗೆ ಜೀವನದ ಭೌತಿಕ ಮತ್ತು ಆಧ್ಯಾತ್ಮಿಕ ಎರಡೂ ಆಯಾಮಗಳಲ್ಲಿ ಬೆಳವಣಿಗೆ ಹೊಂದಲು ನೆರವಾಗಲಿದೆ. ಯುವಕರು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತು, ಸಮಾಜಕ್ಕೆ ಆದರ್ಶ ನಾಗರಿಕರಾಗಿ ರೂಪುಗೊಳ್ಳುವಂತೆ ವಿವಿಧ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

ಕೇಂದ್ರದ ಪ್ರಮುಖ ಉದ್ದೇಶಗಳು
• ಯುವಕರಲ್ಲಿ ನೈತಿಕ ಮೌಲ್ಯಗಳು ಮತ್ತು ಉತ್ತಮ ನಡವಳಿಕೆಯನ್ನು ಬೆಳೆಸುವುದು.
• ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ತಲೆ–ಹೃದಯ–ಕೈ (Head–Heart–Hand) ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಉತ್ತೇಜನ ನೀಡುವುದು.
• ಉನ್ನತ ಜೀವನ ಮೌಲ್ಯಗಳು ಹಾಗೂ ಸೇವಾ ಮನೋಭಾವವನ್ನು ಬೆಳೆಸುವುದು.
• ಸ್ವಾಮಿ ವಿವೇಕಾನಂದರು ಸೇರಿದಂತೆ ಮಹನೀಯರ ಸೇವೆ ಮತ್ತು ವ್ಯಕ್ತಿತ್ವ ನಿರ್ಮಾಣದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೇಪಿಸುವುದು.
• ಭಾರತೀಯ ಸಂಸ್ಕೃತಿ ಮತ್ತು ಅದರ ಸಾರ್ವತ್ರಿಕ ಮೌಲ್ಯಗಳನ್ನು ಪರಿಚಯಿಸುವುದು.
• ಯುವಕರ ವೃತ್ತಿಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
• ಆಧುನಿಕ ಯುಗಕ್ಕೆ ಅಗತ್ಯವಾದ ಜೀವನ ಕೌಶಲ್ಯಗಳು ಹಾಗೂ ಡಿಜಿಟಲ್ ಮಾಧ್ಯಮಗಳ ವಿವೇಚನಾತ್ಮಕ ಬಳಕೆಯ ಬಗ್ಗೆ ಅರಿವು ಮೂಡಿಸುವುದು.
• ಸಮಾಜದ ಅಭಿವೃದ್ಧಿಯಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ಯುವಕರನ್ನು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular