HomeIndiaದೇಶ ಕೊಳ್ಳೆ ಹೊಡೆದ ಈಸ್ಟ್ ‘ಇಂಡಿಯಾ’ ಕಂಪನಿ, ಉಗ್ರ ಸಂಘಟನೆಗಳೂ 'ಇಂಡಿಯಾ' ಹೆಸರು ಹೊಂದಿವೆ: ಕಾಂಗ್ರೆಸ್...

ದೇಶ ಕೊಳ್ಳೆ ಹೊಡೆದ ಈಸ್ಟ್ ‘ಇಂಡಿಯಾ’ ಕಂಪನಿ, ಉಗ್ರ ಸಂಘಟನೆಗಳೂ ‘ಇಂಡಿಯಾ’ ಹೆಸರು ಹೊಂದಿವೆ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಮೋದಿ ಚಾಟಿ

ನವದೆಹಲಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ ಮಾಡಿರುವ ಬಗ್ಗೆ ಪ್ರಧಾನಿ ಮೋದಿ ಟೇಕಿಸಿದ್ದಾರೆ.

ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕೆ ದಿಕ್ಕು ದೆಸೆ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಇಂಡಿಯಾ’ ಮೈತ್ರಿಕೂಟವನ್ನು ನಿಷೇಧಿತ ಇಂಡಿಯನ್ ಮುಜಾಹಿದ್ದಿನ್ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಹೋಲಿಸಿದ್ದಾರೆ. ಭಾರತವನ್ನು ಕೊಳ್ಳೆ ಹೊಡೆದ ಈಸ್ಟ್ ಇಂಡಿಯಾ ಕಂಪನಿ ಕೂಡ ಇಂಡಿಯಾ ಹೆಸರು ಹೊಂದಿತ್ತು. ದಿಕ್ಕೆಟ್ಟು ಹೋದ 26 ಪಕ್ಷಗಳು ಒಂದಾಗಿ ಇಂಡಿಯಾ ಎಂದು ಹೆಸರು ಹೊಂದಿವೆ ಎಂದರು.

ಉಗ್ರಸಂಘಟನೆಗಳ ಹೆಸರಲ್ಲೂ ಇಂಡಿಯಾ ಇದೆ. ಭಾರತ ಕೊಳ್ಳೆ ಹೊಡೆದ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಯಲ್ಲೂ ಇಂಡಿಯಾ ಹೆಸರಿದೆ. ಈ ಇಂಡಿಯಾ ಮೈತ್ರಿಕೂಟದ ನಾಯಕರು ಭಾರತದ ಸಂಪತ್ತನ್ನು ಲೂಟಿ ಮಾಡುವವರೇ, ಇದು ಕೊಳ್ಳೆಹೊಡೆಯುವವರ ಲೂಟಿಕೋರರ ಗುಂಪು ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular