ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ.
ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ನಾನು ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಎಲ್ಲಾ ಆಸ್ಟ್ರೇಲಿಯಾದ ಕ್ರಿಕೆಟ್ ಅಭಿಮಾನಿಗಳನ್ನು ಈ ವರ್ಷ ಕ್ರಿಕೆಟ್ ವಿಶ್ವಕಪ್‌ಗೆ ಭಾರತಕ್ಕೆ ಆಹ್ವಾನಿಸುತ್ತೇನೆ. ಆ ಸಮಯದಲ್ಲಿ ನೀವು ಭಾರತದಲ್ಲಿ ಭವ್ಯವಾದ ದೀಪಾವಳಿ ಆಚರಣೆಯನ್ನು ಸಹ ನೋಡುತ್ತೀರಿ” ಎಂದು ಆಹ್ವಾನಿಸಿದರು.
ODI ವರ್ಲ್ಡ್ ಕಪ್ ಭಾರತದಲ್ಲಿ ಅಕ್ಟೋಬರ್ ಮತ್ತು ನವೆಂಬರ್ 2023 ರಲ್ಲಿ ನಡೆಯಲಿದೆ. ಕ್ರೀಡಾ ವೆಬ್‌ಸೈಟ್ ಕ್ರಿಕ್‌ಬಜ್‌ನ ವರದಿಯ ಪ್ರಕಾರ 2023 ರ ವಿಶ್ವಕಪ್‌ನ ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಅಕ್ಟೋಬರ್ 5 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
https://twitter.com/ANI/status/1661186107214635009?ref_src=twsrc%5Etfw%7Ctwcamp%5Etweetembed%7Ctwterm%5E1661186107214635009%7Ctwgr%5E0b6a503bacfbd9dc73fc2ddf795706dbb6c72819%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fmint-epaper-dh9c9728210dd14ee2acf4498372eadb6e%2Fpmmodiinvitesaustralianpmanthonyalbanesetowatchcricketworldcupinindia-newsid-n502719846