ಇಂದು ಬಸವ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ. ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ ಆಲೋಚನೆಗಳು ಮತ್ತು ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ. ದಮನಿತರನ್ನು ಸಬಲಗೊಳಿಸಲು ಒತ್ತು ನೀಡುತ್ತಾ ಸದೃಢ ಮತ್ತು ಸಮೃದ್ಧ ಸಮಾಜ ನಿರ್ಮಾಣಕ್ಕೆ ಅವರು ಕೊಡುಗೆ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬಸವೇಶ್ವರರ ಬೋಧನೆಗಳು ಸಮಾಜದ ಮೇಲೆ ಬೀರಿದ ಪ್ರಭಾವದ ಬಗ್ಗೆ ಮೋದಿ ಪ್ರಸ್ತಾಪಿಸಿದ್ದಾರೆ. ಮಾನವೀಯತೆಯ ಸೇವೆಯನ್ನು ಪ್ರೇರೇಪಿಸುವ ಬಸವೇಶ್ವರರ ಚಿಂತನೆಗಳು ಮತ್ತು ವಿಚಾರಗಳನ್ನು ಶ್ಲಾಘಿಸಿದ್ದಾರೆ.
ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ, ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ ಆಲೋಚನೆಗಳು ಮತ್ತು ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ. ದಮನಿತರನ್ನು ಸಬಲಗೊಳಿಸಲು ಒತ್ತು ನೀಡುತ್ತಾ ಸದೃಢ ಮತ್ತು ಸಮೃದ್ಧ ಸಮಾಜ ನಿರ್ಮಾಣಕ್ಕೆ ಅವರು ಕೊಡುಗೆ ನೀಡಿದ್ದಾರೆ. pic.twitter.com/rgqoyql5qg
— Narendra Modi (@narendramodi) April 23, 2023
ಜಗದ್ಗುರು ಬಸವೇಶ್ವರರು ತೋರಿಸಿಕೊಟ್ಟ ಹಾದಿಯನ್ನು ನಾವು ಸದಾ ಪಾಲಿಸುತ್ತೇವೆ. ಅವರಿಗೆ ಗೌರವ ಸಲ್ಲಿಸಲು ಅನೇಕ ಅವಕಾಶಗಳು ಒದಗಿರುವುದು ನನ್ನ ಸೌಭಾಗ್ಯ. https://t.co/mTT5P8ZvUa
— Narendra Modi (@narendramodi) April 23, 2023