BREAKING: ಅಮೆರಿಕಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಹ್ವಾನದ ಮೇರೆಗೆ ಜೂನ್ 24ರ ವರೆಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ನವದೆಹಲಿಯಿಂದ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ನರೇಂದ್ರ ಮೋದಿಯವರು, ವಿಶ್ವ ಯೋಗ ದಿನಾಚರಣೆ ಸೇರಿದಂತೆ ನ್ಯೂಯಾರ್ಕ್ ನಗರ, ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ಜೋ ಬೈಡೆನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿಯವರ ಮೊದಲ ಅಮೆರಿಕ ಭೇಟಿ ಇದಾಗಿದ್ದು, ಅಲ್ಲಿ ನೆಲೆಸಿರುವ ಭಾರತೀಯ ಮೂಲದವರು ನರೇಂದ್ರ ಮೋದಿಯವರ ಅದ್ದೂರಿ ಸ್ವಾಗತಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read