ಪ್ರಧಾನಿ ಮೋದಿಯಿಂದ ಈ ಮಟ್ಟದ ಸುಳ್ಳು ನಿರೀಕ್ಷಿಸಿರಲಿಲ್ಲ: ಸಿಎಂ ಸಿದ್ಧರಾಮಯ್ಯ

ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ರೂ. ಹಣ ತಂದು ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಅವರ ಸ್ಥಾನಕ್ಕೆ ಅಗೌರವ ತರುವಂತದ್ದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಎಲ್ಲಿರತ್ತೆ. ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ಅಜ್ಞಾನ ಇರಬಾರದು. ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ನಿರೀಕ್ಷೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

30 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಮ್ಮ ಕೊಲೆಗೆ ಯತ್ನ ನಡೆದಿತ್ತು ಎಂದು ಯಡಿಯೂರಪ್ಪ ಅವರು ಈಗ ಹೇಳುತ್ತಿದ್ದಾರೆ. ಆಗ ಏಕೆ ದೂರು ಕೊಡಲಿಲ್ಲ? ಕೇಸು ಹಾಕಿಸಲಿಲ್ಲ? ಚುನಾವಣೆ ಬಂದಾಗ ಇಂಥ ಹೇಳಿಕೆ ನೀಡಿದರೆ ಅದರಿಂದ ರಾಜಕೀಯ ಲಾಭ ಆಗುತ್ತೆ ಎನ್ನುವುದು ಅವರ ಲೆಕ್ಕಾಚಾರ ಇರಬಹುದು ಎಂದು ಸಿಎಂ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read