HomeIndiaBREAKING: ಮತ್ತೆ ಮೋದಿ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಖರ್ಗೆ ಸೇರಿ ದೇಶವೇ ಹೇಳುತ್ತಿದೆ: ಲೋಕಸಭೆಯಲ್ಲಿ...

BREAKING: ಮತ್ತೆ ಮೋದಿ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಖರ್ಗೆ ಸೇರಿ ದೇಶವೇ ಹೇಳುತ್ತಿದೆ: ಲೋಕಸಭೆಯಲ್ಲಿ ಮೋದಿ ಭಾಷಣ

ನವದೆಹಲಿ: ಮತ್ತೊಮ್ಮೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮತ್ತೊಮ್ಮೆ ಮೋದಿ ಸರ್ಕಾರ ಎಂದು ದೇಶವೇ ಹೇಳುತ್ತಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕೂಡ ಇದೇ ಮಾತು ಹೇಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಲೋಕಸಭೆಯಲ್ಲಿ  ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟ 400 ಸ್ಥಾನ ಮೀರಲಿದೆ. ಬಿಜೆಪಿ ಏಕಾಂಗಿಯಾಗಿ 370ಕ್ಕೂ ಅಧಿಕ ಸ್ಥಾನ ಗಳಿಸಲಿದೆ. ಮತ್ತೊಮ್ಮೆ ಮೋದಿ ಸರ್ಕಾರ ಎಂದು ದೇಶವೇ ಹೇಳುತ್ತಿದೆ. ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾವು ಮತಗಳನ್ನು ಮೀರಿ ಜನರ ಹೃದಯದೊಂದಿಗೆ ಬೆಸೆದುಕೊಂಡಿದ್ದೇವೆ. ಮುಂದಿನ 100 ರಿಂದ 125 ದಿನಗಳಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. ಖರ್ಗೆಯವರು ಕೂಡ 400 ಕ್ಕಿಂತ ಹೆಚ್ಚು ಸ್ಥಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ನಮ್ಮ ಮೂರನೇ ಅವಧಿಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2014ಕ್ಕೆ ಮೊದಲು ಡಿಜಿಟಲ್ ಆರ್ಥಿಕತೆ ಶೂನ್ಯವಾಗಿತ್ತು. ಇವತ್ತು ಜಗತ್ತಿನಲ್ಲಿಯೇ ಭಾರತ ಅತಿ ದೊಡ್ಡ ಡಿಜಿಟಲ್ ಆರ್ಥಿಕತೆ ಹೊಂದಿದೆ. ಡಿಜಿಟಲ್ ಇಂಡಿಯಾದಿಂದ ದೇಶಕ್ಕೆ ಸಾಕಷ್ಟು ಅನುಕೂಲವಾಗಿದೆ. ಹಲವು ಕ್ಷೇತ್ರಗಳಲ್ಲಿ ಭಾರತ ಛಾಪು ಮೂಡಿಸಿದೆ. ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಸೇರಿದಂತೆ ಹಲವು ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular