HomeKarnataka'ಮೋದಿ 100 ತಲೆಯ ರಾವಣ ಎಂದಿದ್ದಕ್ಕೆ ಗುಜರಾತ್ ನಲ್ಲಿ ಅಡ್ರೆಸ್ ಇಲ್ಲದಂತಾದ ಕಾಂಗ್ರೆಸ್ ಗೆ ಮುಳುವಾಗಲಿದೆ...

‘ಮೋದಿ 100 ತಲೆಯ ರಾವಣ ಎಂದಿದ್ದಕ್ಕೆ ಗುಜರಾತ್ ನಲ್ಲಿ ಅಡ್ರೆಸ್ ಇಲ್ಲದಂತಾದ ಕಾಂಗ್ರೆಸ್ ಗೆ ಮುಳುವಾಗಲಿದೆ ‘ವಿಷದ ಹಾವು’ ಹೇಳಿಕೆ’

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ರಾಜ್ಯ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಮೋದಿಯವರ ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಖರ್ಗೆಯವರ ಸಭೆಗಳಿಗೆ ತಡೆಯೊಡ್ಡಬೇಕು. ಈ ರೀತಿ ಮಾತನಾಡದಂತೆ ಆದೇಶಿಸಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಗುಜರಾತ್ ಚುನಾವಣೆಯಲ್ಲಿ ಮೋದಿ 100 ತಲೆಗಳ ರಾವಣ ಎಂದು ಖರ್ಗೆ ಹೇಳಿದ್ದರು. ಈಗ ಗುಜರಾತಿನಲ್ಲಿ ಕಾಂಗ್ರೆಸ್ ಗೆ ಅಡ್ರೆಸ್ ಇಲ್ಲದಂತಹ ಪರಿಸ್ಥಿತಿಯಾಗಿದೆ. ರಾಜ್ಯದಲ್ಲಿಯೂ ಇದೇ ಪರಿಸ್ಥಿತಿ ಬರಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular