ಕರ್ನಾಟಕದ ರಾಜಕಾರಣಿಗಳನ್ನು ಅಪಮಾನಿಸುವುದು ಕಾಂಗ್ರೆಸ್ ಸಂಸ್ಕೃತಿ: ಖರ್ಗೆಯವರ ಪರಿಸ್ಥಿತಿ ನೋಡಿ ದುಃಖವಾಯ್ತು: ಮೋದಿ

ಬೆಳಗಾವಿ: ಕರ್ನಾಟಕದ ರಾಜಕಾರಣಿಗಳನ್ನು ಅಪಮಾನಿಸುವುದು ಕಾಂಗ್ರೆಸ್ ಸಂಸ್ಕೃತಿಯಾಗಿದೆ. ಕಾಂಗ್ರೆಸ್ ಪರಿವಾರದ ವಿರುದ್ಧ ಹೋದರೆ ಅಪಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ನಾಯಕರಾದ ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರಿಗೆ ಕಾಂಗ್ರೆಸ್ ಅಪಮಾನ ಮಾಡಿತ್ತು ಎಂದು ಹೇಳಿದ್ದಾರೆ.

ಇದೇ ಭೂಮಿಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾನು ಗೌರವಿಸುತ್ತೇನೆ. ನನಗೆ ಕೆಲವು ದಿನಗಳ ಹಿಂದೆ ಖರ್ಗೆಯವರ ಪರಿಸ್ಥಿತಿ ನೋಡಿ ದುಃಖವಾಯಿತು. ಛತ್ತೀಸ್ಗಡದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಖರ್ಗೆಯವರಿಗೆ ಅಪಮಾನ ಮಾಡಲಾಗಿದೆ. ಕಾಂಗ್ರೆಸ್ ಅಧಿವೇಶನದ ವೇಳೆ ಬಿಸಿಲು ಇದ್ದರೂ ಖರ್ಗೆಯವರಿಗೆ ಕೊಡೆ ಹಿಡಿದಿರಲಿಲ್ಲ. ಎಐಸಿಸಿ ಅಧ್ಯಕ್ಷರಿಗೆ ಸೂಕ್ತ ನೆರಳಿನ ವ್ಯವಸ್ಥೆ ಮಾಡಿರಲಿಲ್ಲ. ಆದರೆ, ಕಾಂಗ್ರೆಸ್ ಪಕ್ಷದ ಬೇರೆ ನಾಯಕರಿಗೆ ಕೊಡೆ ಹಿಡಿದಿದ್ದರು. ಇದು ಎಐಸಿಸಿ ಅಧ್ಯಕ್ಷರಿಗೆ ಕಾಂಗ್ರೆಸ್ ಪಕ್ಷ ನೀಡುವ ಗೌರವ ಎಂದು ಮೋದಿ ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read