HomeIndiaಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪ್ರಧಾನಿ ಮೋದಿ 'ಮನ್ ಕಿ ಬಾತ್' ತಾತ್ಕಾಲಿಕ...

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’ ತಾತ್ಕಾಲಿಕ ಸ್ಥಗಿತ

ನವದೆಹಲಿ: ಮುಂದಿನ ಮೂರು ತಿಂಗಳ ಕಾಲ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ನಡೆಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿಯಲ್ಲಿ ಪ್ರಧಾನಮಂತ್ರಿ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರಸಾರವಾಗುತ್ತದೆ. ಫೆಬ್ರವರಿ 25ರಂದು ಕಾರ್ಯಕ್ರಮ ಪ್ರಸಾರವಾಗಿದ್ದು, ಮೂರು ತಿಂಗಳ ಕಾಲ ವಿರಾಮ ನೀಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ತಮ್ಮ ರೇಡಿಯೋ ಕಾರ್ಯಕ್ರಮವನ್ನು ಪ್ರಧಾನಿಯವರು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದ್ದಾರೆ. ಮಾರ್ಚ್ ನಲ್ಲಿ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಮೇ ತಿಂಗಳಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಪ್ರತಿ ತಿಂಗಳ ಕೊನೆಯ ಭಾನುವಾರ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಫೆಬ್ರವರಿ 25ರಂದು 110 ನೇ ಸಂಚಿಕೆ ಪ್ರಸಾರವಾಗಿದೆ. 2019ರಲ್ಲಿ ಚುನಾವಣೆ ನೀತಿ ಸಂಹಿತೆ ಕಾರಣ ‘ಮನ್ ಕಿ ಬಾತ್’ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಮೂರು ತಿಂಗಳ ನಂತರ ಜೂನ್ ಕೊನೆ ವಾರ ಪುನರಾರಂಭವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular