ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಅಂದರೆ ಇಂದಿನಿಂದ ಜೂನ್ 1 ರ ಸಂಜೆಯವರೆಗೆ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ ಧ್ಯಾನ ಕೈಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಧ್ಯಾನ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನರೇಂದ್ರ ಮೋದಿಯವರು ಧ್ಯಾನ ಕೈಗೊಳ್ಳುವುದು ಅವರ ವೈಯಕ್ತಿಕ ವಿಚಾರ. ಆದರೆ ಸುದ್ದಿ ವಾಹಿನಿಗಳಲ್ಲಿ ಇದು ಪ್ರಸಾರವಾದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಿರುವ ಮಮತಾ ಬ್ಯಾನರ್ಜಿ, ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕ ಮತದಾನ ಆರಂಭವಾಗುವವರೆಗಿನ ಅವಧಿಯಲ್ಲಿಯೂ ಪರೋಕ್ಷ ಪ್ರಚಾರ ನಡೆಸುವ ಒಂದು ವಿಧಾನ ಎಂದು ದೂರಿದ್ದಾರೆ.
