ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ವಾಹನಗಳ ಸಂಚಾರ, ಮೆಟ್ರೋ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ.
ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಸಂಚಾರ ನಿರ್ಬಂಧ
ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ
ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ನಾಯಂಡಹಳ್ಳಿ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ಸೋಂಪುರ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ಪಿಇಎಸ್ ಕಾಲೇಜು ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ
ಮಾಗಡಿ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ
ಮಾಧವರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ
ಪಾರ್ಲೆ ಬಿಸ್ಕಟ್ಸ್ ಫ್ಯಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ:
ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್‌ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ/ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿದೆ.
ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು-ದೊಡ್ಡಬಳ್ಳಾಪುರ-ದೇವನಹಳ್ಳಿ-ಸೂಲಿಬೆಲೆ-ಹೊಸಕೋಟೆ-ಮಾರ್ಗವಾ ಚಲಿಸಿ-ಚಂದಾಪುರ-ಅತ್ತಿಬೆಲೆ-ಹೊಸೂರು ರಸ್ತೆ ತಲುಪಬಹುದು.
ಮೆಟ್ರೋ ಸಂಚಾರ ಈ ಮಾರ್ಗದಲ್ಲಿ ಬಂದ್:
ಪ್ರಧಾನ ಮೋದಿ ರಸ್ತೆ ಸಂಚಾರದ ಕಾರಣದಿಂದ ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.