ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬಹುನಿರೀಕ್ಷಿತ ಹರ್ಳದಿ ಮಾರ್ಗ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದರು. ಬಳಿಕ ನಮ್ಮ ಮೆಟ್ರೋ ಯೋಜನೆಯ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಪ್ರಧಾನಿ ಮೋದಿ, ಹಳದಿ ಲೈನ್ ಮೆಟ್ರೋ ಸಂಚಾರವನ್ನು ಉದ್ಘಾಟನೆ ಮಾಡಿದರು. ಬಳಿಕ ಹಳದಿ ಮಾರ್ಗದಲ್ಲಿರುವ ಆರ್‌ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಧಾನಿ ಮೋದಿಯವರ್ಗೆ ಸಾಥ್ ನೀಡಿದರು.
ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದಕ್ಕೆ ಬಂದು ಇಳಿದ ಪ್ರಧಾನಿ ಮೋದಿ, ಬಳಿಕ ಬೆಂಗಳೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಗೆ ಪ್ರಯಾಣಿಸಿದರು. ಅಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.