ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಹಳದಿ ಲೈನ್ ಮೆಟ್ರೋ ಸಂಚಾರವನ್ನು ಉದ್ಘಾಟನೆ ಮಾಡಿದರು. 19 ಕಿ.ಮೀವರೆಗಿನ ಯೆಲ್ಲೋ ಲೈನ್ ನಾಳೆಯಿಂದಲೇ ಜನ ಸಂಚಾರಕ್ಕೆ ಲಭ್ಯವಿರಲಿದೆ.
ನಂತರ ಹಳದಿ ಮಾರ್ಗದಲ್ಲಿರುವ ಆರ್‌ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿರುವ ಪ್ರಧಾನಿ ಮೋದಿ, ಬೆಂಗಳೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಗೆ ಪ್ರಯಾಣಿಸಲಿದ್ದಾರೆ.
ಅಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ ಹಂತ-3ಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.