BREAKING : ರಾಮಮಂದಿರದಲ್ಲಿ ಧ್ವಜಾರೋಹಣಕ್ಕೂ ಮುನ್ನ ಶೇಷಾವತಾರ ಮಂದಿರದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ |WATCH VIDEO

ಉತ್ತರ ಪ್ರದೇಶ : ರಾಮಮಂದಿರದಲ್ಲಿ ಧ್ವಜಾರೋಹಣಕ್ಕೂ ಮುನ್ನ ಶೇಷಾವತಾರ ಮಂದಿರದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ.ರೋಡ್ ಶೋ ಮೂಲಕ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಧ್ವಜಾರೋಹಣಕ್ಕೂ ಮುನ್ನ ಶೇಷಾವತಾರ ಮಂದಿರದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ರಾಮ ಮಂದಿರದಲ್ಲಿ ಪವಿತ್ರ ಕೇಸರಿ ಧ್ವಜಾರೋಹಣ ಮಾಡಲಿದ್ದಾರೆ.ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ರಾಮಪಥದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಮೋದಿ ರೋಡ್ ಶೋ ನಡೆಸುತ್ತಿದ್ದರೆ ಇತ್ತ ಜನರು ಮೋದಿಗೆ ಹೂ ಮಳೆ ಸುರಿಸುತ್ತಿದ್ದಾರೆ. ಐತಿಹಾಸಿಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ನೆರೆದಿದ್ದಾರೆ.

ಉತ್ತರ ಪ್ರದೇಶದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಇಂದು ಭಗವಾಧ್ವಜಾರೋಹಣ ನೆರವೇರಿಸಲಾಗುವುದು.ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ದೇವಸ್ಥಾನದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ ಬೆಳಗ್ಗೆ 11:58 ರಿಂದ ಮಧ್ಯಾಹ್ನ 1 ಗಂಟೆಯ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read