ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು.

ಬಿಜೆಪಿ ನಾಯಕ ಹರ್ದೀಪ್ ಸಿಂಗ್ ಪುರಿ ಅವರೊಂದಿಗೆ ಮುಂಜಾನೆ ರಾಜ್‌ ಘಾಟ್‌ ಗೆ ಆಗಮಿಸಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.

ರಾಜ್‌ಘಾಟ್‌ನಿಂದ ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದರು.

2019ರಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ನರೇಂದ್ರ ಮೋದಿ ಅವರು “ಸದೈವ್ ಅಟಲ್” ಮತ್ತು “ರಾಜ್‌ಘಾಟ್” ಗೆ ಭೇಟಿ ನೀಡಿ ದೇಶದ ಮಹಾನ್ ನಾಯಕರಿಗೆ ಗೌರವ ಸಲ್ಲಿಸಿದ್ದರು.

ಇದಲ್ಲದೆ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಮತ್ತು ವಿಸಿಎಎಸ್ ಏರ್ ವೈಸ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪಗುಚ್ಛ ಅರ್ಪಿಸಿದರು.

https://twitter.com/ANI/status/1799621693872447742

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read