HomeIndiaದಕ್ಷಿಣ ಭಾರತ ಸೇರಿ 3 ಹೊಸ ಬುಲೆಟ್ ರೈಲು ಕಾರಿಡಾರ್ ಸಮೀಕ್ಷೆ ಶೀಘ್ರ: ಪ್ರಧಾನಿ ಮೋದಿ...

ದಕ್ಷಿಣ ಭಾರತ ಸೇರಿ 3 ಹೊಸ ಬುಲೆಟ್ ರೈಲು ಕಾರಿಡಾರ್ ಸಮೀಕ್ಷೆ ಶೀಘ್ರ: ಪ್ರಧಾನಿ ಮೋದಿ ಭರವಸೆ

ನವದೆಹಲಿ: ಭಾನುವಾರ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಬುಲೆಟ್ ರೈಲು ಸೇವೆಗಳನ್ನು ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ.

ಉತ್ತರ, ದಕ್ಷಿಣ ಮತ್ತು ಪೂರ್ವ ಭಾರತವನ್ನು ಸಂಪರ್ಕಿಸುವ ಮೂರು ಹೊಸ ರೈಲು ಕಾರಿಡಾರ್‌ಗಳನ್ನು ಸೇರಿಸಲಾಗುವುದು. ಕಾರಿಡಾರ್‌ಗಳ ಸಮೀಕ್ಷೆ ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯು ದೇಶದ ಮೂಲೆ ಮೂಲೆಗೂ ವಂದೇ ಭಾರತ್ ರೈಲುಗಳನ್ನು ವಿಸ್ತರಿಸಲಿದೆ. ವಂದೇ ಭಾರತ್‌ನ 3 ಮಾದರಿಗಳು ದೇಶದಲ್ಲಿ ಓಡಲಿವೆ.  ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್‌ ಕಾರ್ ಮತ್ತು ವಂದೇ ಭಾರತ್ ಮೆಟ್ರೋ. ಇಂದು ಅಹಮದಾಬಾದ್ ಮುಂಬೈ ಬುಲೆಟ್ ಟ್ರೈನ್ ಕಾಮಗಾರಿ ನಡೆಯುತ್ತಿದೆ. ಅದೇ ರೀತಿ ಉತ್ತರ ಭಾರತದಲ್ಲಿ ಒಂದು ಬುಲೆಟ್‌ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್‌ ರೈಲು ಮತ್ತು ಪೂರ್ವ ಭಾರತದಲ್ಲಿ ಒಂದು ಬುಲೆಟ್‌ ರೈಲು ಓಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular