BIG NEWS: ನ. 28ರಂದು ಉಡುಪಿಯಲ್ಲಿ ಒಂದು ಲಕ್ಷ ಭಕ್ತರ ಜೊತೆ ಪ್ರಧಾನಿ ಮೋದಿ ಭಗವದ್ಗೀತೆ ಶ್ಲೋಕ ಪಠಣ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶನಿವಾರದಿಂದ ಒಂದು ತಿಂಗಳ ಕಾಲ ಬೃಹತ್ ಗೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉತ್ಸವ ಉದ್ಘಾಟಿಸಲಿದ್ದಾರೆ.

ಇದರ ಅಂಗವಾಗಿ ನವೆಂಬರ್ 28ರಂದು ನಡೆಯುವ ಲಕ್ಷ ಕಂಠ ಗೀತಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಭಗವದ್ಗೀತೆಯ 10 ಶ್ಲೋಕ ಪಠಣ ಮಾಡಲಿದ್ದಾರೆ. ನವೆಂಬರ್ 30ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎರಡು ವರ್ಷದ ಹಿಂದೆ ನಾನು ಕೋಟಿ ಗೀತಾ ಲೇಖನ ಯಜ್ಞ ಸಂಕಲ್ಪಿಸಿದ್ದೆ. ಅದು ಪೂರ್ಣಗೊಳ್ಳುತ್ತಿದೆ. ಇದರ ಅಂಗವಾಗಿ ಬೃಹತ್ ಗೀತೋತ್ಸವ ಆಯೋಜಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಗೀತೆಗೆ ಜಾಗತಿಕ ಮನ್ನಣೆ ಸಿಗುವಂತೆ ಮಾಡಿದ್ದಾರೆ. ಕೋಟಿ ಗೀತಾ ಯಜ್ಞವನ್ನು ಶ್ರೀ ಕೃಷ್ಣನಿಗೆ ಮೋದಿ ಅವರಿಂದಲೇ ಅರ್ಪಣೆ ಮಾಡಿಸಬೇಕು ಎನ್ನುವ ಆಶಯದಂತೆ ಪ್ರಧಾನಿ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನ. 28ರಂದು ಮಧ್ಯಾಹ್ನ 12 ಗಂಟೆಗೆ ಮೋದಿ ಕೃಷ್ಣಮಠಕ್ಕೆ ಆಗಮಿಸಲಿದ್ದಾರೆ. ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಚಿನ್ನದ ಹೊದಿಕೆಯ ಸುವರ್ಣ ತೀರ್ಥ ಮಂಟಪ ಮತ್ತು ಕನಕನ ಕಿಂಡಿ ಉದ್ಘಾಟಿಸಲಿದ್ದಾರೆ. ನಂತರ ಭಗವದ್ಗೀತೆ ಪಠಣ ಮಾಡುತ್ತಿರುವ ಒಂದು ಲಕ್ಷ ಭಕ್ತರೊಂದಿಗೆ ಕೊನೆಯ 10 ಶ್ಲೋಕಗಳನ್ನು ಪಠಣ ಮಾಡಲಿದ್ದಾರೆ, ಮಠದ ಬಳಿಯ ವಿಶಾಲ ಗದ್ದೆಯಲ್ಲಿ ಗಾಯನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ.

ನವೆಂಬರ್ 30ರಂದು ಸಂತ ಸಂಗಮ ಮತ್ತು ಭಜನೋತ್ಸವ ನಡೆಯಲಿದ್ದು, ನಾಡಿನ ವಿವಿಧ ಮಠಾಧಿಪತಿಗಳು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ವೈಭವದ ಶೋಭಾ ಯಾತ್ರೆ, ಸಂಜೆ 4 ಗಂಟೆಗೆ ಸಾಮೂಹಿಕ ಭಜನೋತ್ಸವ ನಡೆಯಲಿದೆ. ರಾಜ್ಯ ಮತ್ತು ರಾಷ್ಟ್ರ ನಾಯಕರು ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read