HomeKarnatakaಪ್ರಧಾನಿ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರಿಂದ ಸಭೆ: ಹೊಸ ಬಾಂಬ್ ಸಿಡಿಸಿದ ಸಚಿವ ಸಂತೋಷ್ ಲಾಡ್

ಪ್ರಧಾನಿ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರಿಂದ ಸಭೆ: ಹೊಸ ಬಾಂಬ್ ಸಿಡಿಸಿದ ಸಚಿವ ಸಂತೋಷ್ ಲಾಡ್

ಬೀದರ್: ಪ್ರಧಾನಿ ನರೇಂದ್ರ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರು ಸಭೆ ನಡೆಸಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬದಲಾವಣೆ ಚರ್ಚೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಶ್ ಲಾಡ್, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಆದರೆ ಪ್ರಧಾನಿ ಮೋದಿ ಬದಲಾವಣೆಗೆ ಚರ್ಚೆ ನಡೆದಿದೆ ಎಂದರು.

ಪ್ರಧಾನಿ ಮೋದಿಯವರನ್ನು ಬದಲಾವಣೆ ಮಾಡಬೇಕು ಎಂದು ಆರ್.ಎಸ್.ಎಸ್ ನಾಯಕರು ಸಭೆ ನಡೆಸಿದ್ದಾರೆ. ಮೋದಿ ಬದಲಾವಣೆಗೆ ಹುನಾರ ನಡೆದಿದೆ. ಈ ಬಗ್ಗೆ ಬಿಜೆಪಿ ನಾಯಕರನ್ನು ಕೇಳಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular