HomeIndiaBIG NEWS: ಇಂದಿನಿಂದ ಪ್ರಧಾನಿ ಮೋದಿ ರಷ್ಯಾ ಪ್ರವಾಸ: ‘ಬ್ರಿಕ್ಸ್’ ಶೃಂಗಸಭೆಯಲ್ಲಿ ಭಾಗಿ

BIG NEWS: ಇಂದಿನಿಂದ ಪ್ರಧಾನಿ ಮೋದಿ ರಷ್ಯಾ ಪ್ರವಾಸ: ‘ಬ್ರಿಕ್ಸ್’ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಅಕ್ಟೋಬರ್ 22, 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಇಂದಿನಿಂದ ಎರಡು ದಿನ ರಷ್ಯಾದ ಕಜಾನ್ ನಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ರಷ್ಯಾ –ಉಕ್ರೇನ್, ಇಸ್ರೇಲ್- ಹಮಾಸ್ ಯುದ್ಧ ನಿಲ್ಲಿಸುವ ಬಗ್ಗೆ ಪ್ರಧಾನಿ ಮೋದಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರವಾಸದ ವೇಳೆ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಮಾತುಕತೆ ನಡೆಸಲಿದ್ದಾರೆ.

ಬ್ರಿಕ್ಸ್ ರಾಷ್ಟ್ರಗಳ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕೂಡ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟವಾಗಿರುವ ಬ್ರಿಕ್ಸ್ ಸಭೆಯಲ್ಲಿ ಇಥಿಯೋಪಿಯಾ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಸೇರಿಕೊಂಡಿರುವುದು ಆ ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶೃಂಗಸಭೆಯಲ್ಲಿ ಆರ್ಥಿಕ ಅಭಿವೃದ್ಧಿ, ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಹವಾಮಾನ ಬದಲಾವಣೆ ಕುರಿತಾದ ಚರ್ಚೆ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular