HomeKarnatakaಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಗಳೂರು ನಗರ ಮತ್ತು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡೋಕೆ, ರಾಜ್ಯದ ಹಿತ ಕಾಪಾಡಲು ಸಹಕಾರ ಕೊಡುತ್ತೇವೆ. ನಮ್ಮ ನೆಲ, ಜಲ, ಭಾಷೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ಅಗತ್ಯ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾವೇರಿ ನದಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು.ಕಾವೇರಿ ನೀರಿನ ಬಗ್ಗೆ ಪ್ರಧಾನಿ ಮೋದಿ ಬಳಿ ರಾಜ್ಯದ ಸಂಸದರು ಮಾತನಾಡಲಿ, ಕಾವೇರಿ ನದಿ ಸಂಬಂಧ ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯಲಿ. ಕಾವೇರಿಗಾಗಿ ಎಲ್ಲರೂ ಪಕ್ಷಾತೀತವಾಗಿ ಹೋರಾಟ ಮಾಡೋಣ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular