ಮೈಸೂರು: ಪ್ರಧಾಅನಿ ನರೇಂದ್ರ ಮೋದಿ ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದ ವೇಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನೋ ಗುಟ್ಟು ಹೇಳಿದ ಫೋಟೋಗಳು ಭಾರಿ ವೈರಲ್ ಆಗಿತ್ತು. ಇದೀಗ ಆ ಗುಟ್ಟೇನು ಎಂಬುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಶಾಸಕ ಹ್ಯಾರಿಸ್ ನಿವಾಸದ ಮೇಲೆ ಇಡಿ ದಾಳಿ ವಿಚಾರವಾಗಿ ತನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನಾನು ಪ್ರಚಾರಕ್ಕೆ ಹೋಗುತ್ತಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಗೆಲ್ಲಬಹುದು. ಬಿಜೆಪಿಯವರು ಪಂಚರಾಜ್ಯ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿಕೊಂಡಿದ್ದಾರೆ. ಈ ಹಿಂದೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದ ಬಿಜೆಪಿಯವರು ಈಗ ಅವರೇ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.

