HomeIndiaBREAKING: ಮಹಾ ಕುಂಭಮೇಳದ ಭಾರೀ ಅಗ್ನಿ ಅವಘಡ ಸ್ಥಳದಲ್ಲಿ ಯುಪಿ ಸಿಎಂ ಯೋಗಿ ಪರಿಶೀಲನೆ: ಕರೆ...

BREAKING: ಮಹಾ ಕುಂಭಮೇಳದ ಭಾರೀ ಅಗ್ನಿ ಅವಘಡ ಸ್ಥಳದಲ್ಲಿ ಯುಪಿ ಸಿಎಂ ಯೋಗಿ ಪರಿಶೀಲನೆ: ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಟೆಂಟ್ ಗಳು ಸುಟ್ಟು ಹೋಗಿವೆ. ವಿವೇಕಾನಂದ ಸೇವಾ ಸಮಿತಿಗೆ ಸೇರಿದ ಟೆಂಟ್ ಗಳು ಬೆಂಕಿಗೆ ಆಹುತಿಯಾಗಿವೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸುತ್ತಿದೆ. ಸೆಕ್ಟರ್ 19ರಲ್ಲಿ ಸುಮಾರು 12ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಪೋಟಗೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಎಸ್‌ಡಿಆರ್ಎಫ್ ನಿಂದ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯಾಗರಾಜ್‌ ನಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಕರೆ ಮಾಡಿ ಅವರೊಂದಿಗೆ ಮಾತನಾಡಿ ಘಟನೆ ಕುರಿತು ವಿಚಾರಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಕಿಯನ್ನು ನಂದಿಸಲಾಗಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular