HomeKarnatakaಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು: 2 ಲಕ್ಷ ಜನ ಭಾಗಿ ನಿರೀಕ್ಷೆ

ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು: 2 ಲಕ್ಷ ಜನ ಭಾಗಿ ನಿರೀಕ್ಷೆ

ಶಿವಮೊಗ್ಗ: ಪ್ರಧಾನಿ ಮೋದಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಸಕಲ ಸಿದ್ದತೆಯೊಂದಿಗೆ ಶಿವಮೊಗ್ಗ ನಗರ ಸಜ್ಜುಗೊಂಡಿದೆ.

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಹಾಗೂ ಇತರೆ ಕಾಮಗಾರಿಗಳ ಲೋಕಾರ್ಪಣೆಗೆ ಸರ್ವ ರೀತಿಯಲ್ಲಿ ಸಿದ್ದತೆ ಮಾಡಲಾಗಿದ್ದು, ಇಡೀ ನಗರವೇ ಪ್ರಧಾನಿಯವರ ಸ್ವಾಗತಕ್ಕಾಗಿ ಸಿಂಗರಿಸಿಕೊಂಡು ಸಜ್ಜಾಗಿದೆ.

ಪ್ರಧಾನಿಯವರ ಕಾರ್ಯಕ್ರಮಕ್ಕೆ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್ ಗಳನ್ನು ತೆರೆಯಲಾಗಿದೆ. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರೆಲ್ಲರೂ ಬೆಳಿಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಶಿವಮೊಗ್ಗ-ಸಂತೇಕಡೂರು ರಸ್ತೆಯ ಎರಡೂ ಕಡೆ  ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು. ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‍ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ.

ಲೋಕಾರ್ಪಣೆಗೊಳ್ಳಲಿರುವ ಯೋಜನೆಗಳು:

ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ 449.22 ಕೋಟಿ ರೂ.ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ

ಒಟ್ಟು 896.16 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ 45 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ 2 ಲಕ್ಷ ಲೀಟರ್ ಸಾಮರ್ಥ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನೆ ಸೇರಿ ವಿವಿಧ ಕಾಮಗಾರಿ ಉದ್ಗಾಟಿಸಲಿದ್ದಾರೆ.

ಶಂಕುಸ್ಥಾಪನೆಗೊಳ್ಳುವ ಯೋಜನೆಗಳು:

995 ಕೋಟಿ ರೂ.ವೆಚ್ಚದಲ್ಲಿ 103 ಕಿ.ಮೀ ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, 97.18 ಕೋಟಿ ರೂ.ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 862 ಕೋಟಿ ರೂ.ಮೊತ್ತದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular