HomeKarnatakaಸೋಮವಾರ ರಾಜ್ಯಕ್ಕೆ ಮೋದಿ: ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆ: ಬೆಳಗಾವಿಯಲ್ಲಿ ರೈತರ ಖಾತೆಗೆ ಹಣ ಜಮಾ

ಸೋಮವಾರ ರಾಜ್ಯಕ್ಕೆ ಮೋದಿ: ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆ: ಬೆಳಗಾವಿಯಲ್ಲಿ ರೈತರ ಖಾತೆಗೆ ಹಣ ಜಮಾ

ಬೆಂಗಳೂರು: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಬೆಳಗ್ಗೆ 11:45 ರಿಂದ 11:55 ರ ವರೆಗೆ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 1.15 ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪ್ರಧಾನಿಯವರು ಆಗಮಿಸಲಿದ್ದಾರೆ. ಮಧ್ಯಾಹ್ನ 2.25ಕ್ಕೆ ಪ್ರಧಾನಿ ಮೋದಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ತೆರಳುವರು.

ಮಧ್ಯಾಹ್ನ 2.50 ರಿಂದ 3.15 ರವರೆಗೆ ಹೆಲಿಪ್ಯಾಡ್ ನಿಂದ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ಮೂಲಕ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. 3.15 ಕ್ಕೆ ಪಿಎಂ ಕಿಸಾನ್ ಯೋಜನೆ ಫಲಾನುಭವಿ ರೈತರ ಖಾತೆಗೆ 13 ನೇ ಕಂತಿನ ಹಣ ಡಿಬಿಟಿ ಮೂಲಕ ಜಮಾ ಮಾಡಲಿದ್ದಾರೆ. ಬಳಿಕ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಮಾಡಿ ಹೆಲಿಕಾಪ್ಟರ್ ನಲ್ಲಿ ಬೆಳಗಾವಿ ಏರ್ ಪೋರ್ಟ್ ಗೆ ತೆರಳಿ ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular