HomeKarnatakaಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ವಿವಾದಿತ ಹೇಳಿಕೆ ನೀಡಿದ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್ ದರ 100 ರೂಪಾಯಿ ಇಳಿಕೆ ಬಗ್ಗೆ ಪ್ರಸ್ತಾಪಿಸಿ, ನನಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡೆಯುತ್ತೇನೆ ಎಂದು ಮಂಜುನಾಥ್ ಹೇಳಿದ್ದರು. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ನಡೆದ ಸಮುದಾಯ ಭವನ ಉದ್ಘಾಟನೆಯ ವೇಳೆ ಮಂಜುನಾಥ್ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಪ್ರಧಾನಿ ಹುದ್ದೆಗೆ ಅಪಮಾನ, ಶಾಂತಿ ಕದಡುವ ಹೇಳಿಕೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ದೂರು ನೀಡಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಜಿ.ಎಸ್. ಮಂಜುನಾಥ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular