ಬಿಜೆಪಿ -ಜೆಡಿಎಸ್ ಮೈತ್ರಿ ಚರ್ಚೆ ಹೊತ್ತಲ್ಲೇ ಮೋದಿ ಭೇಟಿಯಾದ ಸಂಸದೆ ಸುಮಲತಾ: ರಾಜಕೀಯ ಕುತೂಹಲ

ನವದೆಹಲಿ: ಬಿಜೆಪಿ -ಜೆಡಿಎಸ್ ಮೈತ್ರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಾತುಕತೆ ನಡೆಸಿದ್ದಾರೆ. ಅವರ ಈ ಬೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ತಮ್ಮ ಭೇಟಿಯ ಕುರಿತಾಗಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ ನಡೆದ G20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆಗಳನ್ನು ತಿಳಿಸಿದೆ.

ಈ ಸಂದರ್ಭದಲ್ಲಿ ನನ್ನ ಕ್ಷೇತ್ರ ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದಕ್ಕೆ ಸಂಬಂಧಿಸಿದ ಅನೇಕ ಸಲಹೆ ಸಹಕಾರವನ್ನು ಪ್ರಧಾನ ಮಂತ್ರಿಗಳು ನೀಡಿದರು.

ಸಾಕಷ್ಟು ಒತ್ತಡ ಮತ್ತು ಬಿಡುವಿಲ್ಲದ ಕೆಲಸಗಳ ನಡುವೆಯೂ ಕಡಿಮೆ ಸಮಯದಲ್ಲಿ ನನ್ನ ಭೇಟಿಗೆ ಅವಕಾಶ ನೀಡಿದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ದೇಶದ ಬಗೆಗಿನ ದೂರದೃಷ್ಟಿ ಯಾವಾಗಲೂ ನಮಗೆ ಸ್ಫೂರ್ತಿ ಹಾಗೂ ಮಾದರಿ. ಧನ್ಯವಾದಗಳು ಸರ್ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/sumalathaA/status/1704001460483326049

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read