ಜಮ್ಮು ಕಾಶ್ಮೀರದ ದೋಡಾದಲ್ಲಿ ಇಂದು ಮೋದಿ ಭರ್ಜರಿ ಪ್ರಚಾರ: 50 ವರ್ಷಗಳ ನಂತರ ಜಿಲ್ಲೆಗೆ ಪ್ರಧಾನಿ ಭೇಟಿ

ದೋಡಾ: ವಿಧಾನಸಭಾ ಚುನಾವಣೆಯ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಇಂದು ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು 50 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ ಹೇಳಿದ್ದಾರೆ.

ಸಾರ್ವಜನಿಕ ಸಭೆಯ ಸಿದ್ಧತೆಗಳನ್ನು ಪರಿಶೀಲಿಸಲು ಶುಕ್ರವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ್ದ ಅವರು. ಸುಮಾರು 50 ವರ್ಷಗಳ ನಂತರ ದೋಡಾಗೆ ಮೊದಲ ಪ್ರಧಾನಿ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು ದೂರದ ಪ್ರದೇಶಗಳಿಗೆ ಆದ್ಯತೆ ನೀಡಿರುವುದರಿಂದ ಸಾರ್ವಜನಿಕರಲ್ಲಿ ಸಾಕಷ್ಟು ಉತ್ಸಾಹವಿದೆ ಎಂದು ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ದೋಡಾದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಅಭಿವೃದ್ಧಿ ಹೊಂದಿದ ಪ್ರದೇಶಗಳಿಗೆ ಸಮನಾಗಿ ದೂರದ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಪ್ರಧಾನಿ ಮೋದಿ ಸಾಕಷ್ಟು ಕೆಲಸ ಮಾಡಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಪಕ್ಷವು ಎಲ್ಲಾ ಸ್ಥಾನಗಳನ್ನು ಆರಾಮವಾಗಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನವನ್ನು ನಿಗದಿಪಡಿಸಲಾಗಿದೆ. ಮೊದಲ ಹಂತವು ಸೆಪ್ಟೆಂಬರ್ 18 ರಂದು, ನಂತರ ಎರಡು ಹಂತಗಳು ಸೆಪ್ಟೆಂಬರ್ 25 ರಂದು ಮತ್ತು ಅಕ್ಟೋಬರ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆ ಅಕ್ಟೋಬರ್ 8 ರಂದು ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರವು 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ, ಇದರಲ್ಲಿ 7 ಎಸ್‌ಸಿಗಳಿಗೆ ಮೀಸಲಾಗಿದೆ ಮತ್ತು 9 ಎಸ್ಟಿಗಳಿಗೆ ಮೀಸಲಿಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read