HomeIndiaರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ನಾಳೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ನಾಳೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ನೇಮಕಾತಿಗಳು ನಡೆಯುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಗ್ರಾಮೀಣ ಡಾಕ್ ಸೇವಕರು, ಕಮರ್ಷಿಯಲ್-ಕಮ್-ಟಿಕೆಟ್ ಕ್ಲರ್ಕ್, ಜೂನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಜೂನಿಯರ್ ಅಕೌಂಟ್ಸ್ ಕ್ಲರ್ಕ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಟ್ಯಾಕ್ಸ್ ಅಸಿಸ್ಟೆಂಟ್ಸ್, ಇನ್ಸ್‌ಪೆಕ್ಟರ್‌ಗಳು, ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರು, ನರ್ಸಿಂಗ್ ಆಫೀಸರ್‌ಗಳಂತಹ ವಿವಿಧ ಹುದ್ದೆಗಳಿಗೆ ಸೇರಿಕೊಳ್ಳುತ್ತಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular