ಡಿ.23 ರಂದು ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 23 ರಂದು ವಿವಿಧ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ(ಪಿಎಂಒ) ತಿಳಿಸಿದೆ.

ರೋಜ್‌ಗಾರ್ ಮೇಳದ ಉಪಕ್ರಮದ ಭಾಗವಾಗಿರುವ ಈ ಕಾರ್ಯಕ್ರಮವು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೋದಿಯವರ ಬದ್ಧತೆ ಹೊಂದಿದೆ. ಅಂದು ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈವೆಂಟ್ ದೇಶದಾದ್ಯಂತ 45 ಸ್ಥಳಗಳಲ್ಲಿ ನಡೆಯಲಿದೆ. ನೇಮಕಾತಿ ಸಚಿವಾಲಯಗಳು ಮತ್ತು ಇಲಾಖೆಗಳಾದ ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ಇತರ ಇಲಾಖೆಗಳ ನೇಮಕಾತಿ ಇದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read