HomeIndiaಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್ ಘಟಕ ಪ್ರಧಾನಿ ಮೋದಿಯಿಂದ ಉದ್ಘಾಟನೆ

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್ ಘಟಕ ಪ್ರಧಾನಿ ಮೋದಿಯಿಂದ ಉದ್ಘಾಟನೆ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ಟಾಟಾ ಏರ್ ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಅವರು ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಲಿದ್ದಾರೆ.

ಅದೇ ದಿನ ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಕ್ಯಾಥರಿನ್ ವಾಟ್ರಿನ್ ಅವರು ಬೆಂಗಳೂರಿನಲ್ಲಿ ಹಮ್ಮರ್ ಕ್ಷಿಪಣಿ ಸೇರಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಈ ವೇಳೆ ಹಲವು ರಕ್ಷಣಾ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಲಾಗುವುದು.

ರಕ್ಷಣಾ ಇಲಾಖೆಯಿಂದ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರ ಒಪ್ಪಂದವನ್ನು ಇನ್ನೂ ಹತ್ತು ವರ್ಷ ವಿಸ್ತರಿಸುವ ಮತ್ತು ಹಮ್ಮರ್ ರಕ್ಷಣಾ ಕ್ಷಿಪಣಿಯ ಜಂಟಿ ತಯಾರಿಕೆ ಸೇರಿದಂತೆ ಹಲವು ರಕ್ಷಣಾ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular