ಚಂದ್ರಯಾನ ಲ್ಯಾಂಡಿಂಗ್: ದಕ್ಷಿಣ ಆಫ್ರಿಕಾದಿಂದಲೇ ವರ್ಚುಯಲ್ ಮೂಲಕ ಮೋದಿ ಭಾಗಿ

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾದಲ್ಲಿರುವ ಪ್ರಧಾನಿ ಮೋದಿ ಚಂದ್ರಯಾನ ಲ್ಯಾಂಡಿಂಗ್ ಕಾರ್ಯಕ್ರಮಕ್ಕೆ ವರ್ಚುಯಲ್ ಮೂಲಕ ಭಾಗಿಯಾಗಲಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದಿಂದ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವರ್ಚುಯಲ್ ಆಗಿ ವೀಕ್ಷಿಸಲಿದ್ದಾರೆ.

ಅಂದಹಾಗೆ, 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾಕ್ಕೆ ಮೂರು ದಿನಗಳ ಅಧಿಕೃತ ಭೇಟಿಯಲ್ಲಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ, ಚಂದ್ರಯಾನ-3, ಬುಧವಾರ ಸಂಜೆ 6:04 ರ ಸುಮಾರಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಒಂದು ಸವಾಲಿನ ಕೆಲಸವಾಗಿದೆ. ಇದು ಅತ್ಯಂತ ಒರಟಾದ ಮತ್ತು ಪರ್ವತ ಪ್ರದೇಶವಾಗಿದೆ. ಲ್ಯಾಂಡರ್ ಲ್ಯಾಂಡಿಂಗ್‌ನಲ್ಲಿ ಯಶಸ್ವಿಯಾದರೆ, ಈ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯೊಂದು ಮೃದುವಾಗಿ ಇಳಿಯುವುದು ಇದೇ ಮೊದಲ ಬಾರಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read