ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ : ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 26ರ ಶನಿವಾರ ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡುತ್ತಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇತಿಹಾಸ ಸೃಷ್ಟಿಸಿದ ಇಸ್ರೋ ತಂಡವನ್ನು ಅಭಿನಂದಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಬಿಜೆಪಿ ಸಿದ್ಧತೆ ಕೈಗೊಂಡಿದ್ದು, 1 ಕಿ.ಮೀ. ರೋಡ್ ಶೋ ಆಯೋಜಿಸಲು ನಿರ್ಧರಿಸಲಾಗಿದೆ.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಸುಗಮ ಸಂಚಾರ ಹಾಗೂ ಸುರಕ್ಷತೆ ದೃಷ್ಟಿಯಿಂದ ನಗರ ಸಂಚಾರ ಪೊಲೀಸರು ಕೆಲ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ. ನಾಳೆ ಬೆಳಗ್ಗೆ 4.30 ರಿಂದ ಬೆಳಗ್ಗೆ 9.30 ರವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆ, ಯಶವಂತಪುರ ಮೇಲ್ಸುತೇವೆ, ಮಾಗಡಿ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ ಬದಲು ಪರ್ಯಾಯ ರಸ್ತೆಗಳನ್ನು ಬಳಸಲು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read