HomeIndiaಇಂದು, ನಾಳೆ ಪ್ರಧಾನಿ ಮೋದಿ ಆಂಧ್ರಪ್ರದೇಶ, ಕೇರಳ ಪ್ರವಾಸ : 4,000 ಕೋಟಿ ರೂ.ಗಳ ಯೋಜನೆಗಳಿಗೆ...

ಇಂದು, ನಾಳೆ ಪ್ರಧಾನಿ ಮೋದಿ ಆಂಧ್ರಪ್ರದೇಶ, ಕೇರಳ ಪ್ರವಾಸ : 4,000 ಕೋಟಿ ರೂ.ಗಳ ಯೋಜನೆಗಳಿಗೆ ʻನಮೋʼ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 4,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ಮಂಗಳವಾರ ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಪಿಎಂಒ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ (ಎನ್ಎಸಿಐಎನ್) ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.

ಜನವರಿ 17 ರ ನಾಳೆ ಪ್ರಧಾನ ಮಂತ್ರಿಗಳು ಕೇರಳದ ಗುರುವಾಯೂರ್ ದೇವಸ್ಥಾನ ಮತ್ತು ತ್ರಿಪ್ರಯಾರ್ ಶ್ರೀ ರಾಮಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಕೇರಳದ ಬಂದರುಗಳು, ಹಡಗು ಮತ್ತು ಜಲಮಾರ್ಗ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular