HomeLatest NewsBIG NEWS : ನಾಳೆ ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ ; ಆದಿಚುಂಚನಗಿರಿಯಲ್ಲಿ ಭೈರವೈಕ್ಯ ...

BIG NEWS : ನಾಳೆ ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ ; ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ.!

ಮಂಡ್ಯ: ಕಲೆ, ಸಂಸ್ಕೃತಿ ಮತ್ತು ಆಧ್ಯಾತ್ಮದ ತ್ರಿವೇಣಿ ಸಂಗಮವಾಗಿರುವ ಆದಿಚುಂಚನಗಿರಿಯಲ್ಲಿ ₹100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದು, ಮಠದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಇಡೀ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಪ್ರಧಾನಿಯವರ ಆಗಮನಕ್ಕಾಗಿ ಮಠದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

 ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ಆದಿಚುಂಚನಗಿರಿಯಲ್ಲಿ ನಿರ್ಮಿಸಲಾಗಿರುವ ಶ್ರೀಗುರು ಭೈರವೈಕ್ಯ ಮಂದಿರ ಕೇವಲ ಕಲ್ಲು-ಮಣ್ಣಿನ ಕಟ್ಟಡವಲ್ಲ, ಅದೊಂದು ಜೀವಂತ ಆಧ್ಯಾತ್ಮ ಧಾಮವಾಗಿದೆ. ಏಪ್ರಿಲ್ 15ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಅವರು ಈ ಭವ್ಯ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಸ್ತುಶಿಲ್ಪದ ವೈಭವ: ಈ ಮಂದಿರವು ಹೊಯ್ಸಳ, ಚೋಳ, ಚಾಲುಕ್ಯ ಹಾಗೂ ಗಂಗ ವಾಸ್ತುಶಿಲ್ಪದ ಅದ್ಭುತ ಸಮ್ಮಿಶ್ರಣವಾಗಿದೆ. ಒರಿಸ್ಸಾದ ಸೂರ್ಯ ದೇಗುಲದ ಕಲೆಯನ್ನೂ ಇಲ್ಲಿ ಕಾಣಬಹುದಾಗಿದೆ.

ಶಿಲೆಗಳ ಬಳಕೆ: ಮಂದಿರದ ನಿರ್ಮಾಣಕ್ಕೆ ಕೃಷ್ಣಾ (Krishna), ಕೆಳಭಾಗಕ್ಕೆ ಸಂತೆಕಲ್ (Santhekal) ಮತ್ತು ಒಳಭಾಗಕ್ಕೆ ಪೂರ್ತಿಯಾಗಿ ಕೃಷ್ಣಾ ಶಿಲೆಯನ್ನು ಬಳಸಲಾಗಿದೆ. ಧರ್ಮಗುಡಿಗೆ ಇಳಕಲ್ ಮಾದರಿಯ ಶಿಲೆ ಬಳಸಲಾಗಿದೆ.

ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ: ಇದೇ ಮೊದಲ ಬಾರಿಗೆ ಶ್ರೀಮಠಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರಿಗೆ, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಧರಿಸುತ್ತಿದ್ದ ಮಾದರಿಯ ರೇಷ್ಮೆ ಪೇಟ ಮತ್ತು ಆದಿಚುಂಚನಗಿರಿಯ ಸಂಕೇತವಾದ ನವಿಲಿಗೆ ಸಂಬಂಧಿಸಿದ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಗುವುದು.

ಪ್ರಧಾನಿ ಕಾರ್ಯಕ್ರಮದ ವಿವರ:

  1. ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ತಪೋವನಕ್ಕೆ ಆಗಮನ.
  2. ಶ್ರೀ ಕಾಲಭೈರವೇಶ್ವರ ಮಂದಿರಕ್ಕೆ ತೆರಳಿ ದರ್ಶನ ಮತ್ತು ಪೂಜೆ ಸಲ್ಲಿಕೆ.
  3. ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ವೀಕ್ಷಣೆ.
  4. ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಗೋರಕ್ಷನಾಥ ಸಿದ್ಧ ಸಿದ್ಧಾಂತ ಪದ್ಧತಿ’ ಎಂಬ ಗ್ರಂಥ ಬಿಡುಗಡೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular