HomeIndiaಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಅವರು 15ನೇ ಬ್ರಿಕ್ಸ್ ದೇಶಗಳ ಶೃಂಗಸಭೆಯಲ್ಲಿ ಭಾಗವಹಿಸುವರು.

ಬ್ರಿಕ್ಸ್ ಸಂಘಟನೆಯ ದೇಶಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ನಾಯಕರು ಶೃಂಗಸಭೆಯಲ್ಲಿ ಉಪಸ್ಥಿತರಿರುವರು. ಐದು ದೇಶಗಳ ನಡುವೆ ಹಲವು ಮಹತ್ವದ ವಿಷಯಗಳ ಚರ್ಚೆ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೋಹಾನ್ಸ್ ಬರ್ಗ್ ನಲ್ಲಿ ಬ್ರಿಕ್ಸ್ ದೇಶಗಳ ಸಭೆ ನಡೆಯಲಿದೆ. ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಅವರು ಅಲ್ಲಿಂದ ಗ್ರೀಕ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಗ್ರೀಸ್ ಪ್ರವಾಸದ ನಂತರ ಭಾರತಕ್ಕೆ ಹಿಂತಿರುಗಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular