ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ: ಫೆ. 6 ರಂದು ಬೆಂಗಳೂರು, ತುಮಕೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ನಾಯಕರು ಭೇಟಿ ನೀಡಿದ ತೊಡಗಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಬೆಂಗಳೂರು, ತುಮಕೂರಿಗೆ ಭೇಟಿ ನೀಡಲಿದ್ದಾರೆ. ಫೆ. 6 ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿಯವರು ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಅಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಅವರು ಮಾದಾವರ ಸಮೀಪ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನದಲ್ಲಿ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಿದಿರೇಹಳ್ಳಿಯಲ್ಲಿ ಹೆಚ್ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಕಾರ್ಖಾನೆ ಉದ್ಘಾಟಿಸುವ ಅವರು, ಅಲ್ಲಿಯೇ ಜಲಜೀವನ ಮಿಷನ್ ಯೋಜನೆಯಡಿ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರು ತಾಲೂಕಿನ ವಿವಿಧ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read