HomeIndia2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡ ಪ್ರಧಾನಿ; 22.76 ಕೋಟಿ ರೂ....

2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡ ಪ್ರಧಾನಿ; 22.76 ಕೋಟಿ ರೂ. ವೆಚ್ಚವಾಗಿದೆ ಎಂದು ಸರ್ಕಾರದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು 2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡಿದ್ದು, 22.76 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರದಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದ ಮೂಲಕ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ ರಾಷ್ಟ್ರಪತಿಗಳು ಎಂಟು ಬಾರಿ ವಿದೇಶ ಯಾತ್ರೆ ಕೈಗೊಂಡಿದ್ದು, 6.24 ಕೋಟಿ ರೂಪಾಯಿ ವೆಚ್ಚವಾಗಿದ್ದರೆ, ಕೇಂದ್ರ ವಿದೇಶಾಂಗ ಸಚಿವರು 86 ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದು, 20,87,01,475 ರೂಪಾಯಿ ವೆಚ್ಚವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರಪತಿಗಳು ಕೈಗೊಂಡ 8 ವಿದೇಶ ಯಾತ್ರೆಗಳ ಪೈಕಿ ಏಳು ವಿದೇಶ ಪ್ರವಾಸ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೈಗೊಂಡಿದ್ದರೆ ಈಗಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕಳೆದ ಸೆಪ್ಟೆಂಬರ್ ನಲ್ಲಿ ಯುಕೆ ಪ್ರವಾಸ ಕೈಗೊಂಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular