ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬೆಂಗಳೂರಲ್ಲಿ ಹಲವೆಡೆ ಸಂಚಾರ ನಿರ್ಬಂಧ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 20ರ ಶನಿವಾರ ಬಿಜೆಪಿ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ಬಿಜೆಪಿ ಸಮಾವೇಶ ನಡೆಯಲಿದ್ದು, ಎನ್.ಡಿ.ಎ. ಅಭ್ಯರ್ಥಿಗಳ ಪರ ಮೋದಿ ಪ್ರಚಾರ ನಡೆಸಲಿದ್ದಾರೆ. ಭಾರಿ ಸಂಖ್ಯೆಯ ಕಾರ್ಯಕರ್ತರು, ಜನ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ಮಧ್ಯಾಹ್ನ 1ರಿಂದ ಸಂಜೆ 7 ಗಂಟೆಯವರೆಗೆ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.

ಅರಮನೆ ರಸ್ತೆ, ವಸಂತನಗರ ರಸ್ತೆ, ಜಯಮಹಲ್ ರಸ್ತೆ, ಸಿವಿ ರಾಮನ್ ರೋಡ್, ಬಳ್ಳಾರಿ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿದುರ್ಗಾ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು, ಮೇಖ್ರಿ ಸರ್ಕಲ್ ನಿಂದ ಯಶವಂತಪುರದವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮಧ್ಯಾಹ್ನ 12 ರಿಂದ ರಾತ್ರಿ 9 ಗಂಟೆಯವರೆಗೆ ಸಿಎಂಟಿಐ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಬಸವೇಶ್ವರ ಸರ್ಕಲ್, ನಂದಿದುರ್ಗ ರಸ್ತೆ, ಯಶವಂತಪುರ ಗೋವರ್ಧನ್ ಮೂಲಕ ನಗರದೊಳಗೆ ಭಾರಿ ವಾಹನಗಳು ಪ್ರವೇಶಿಸುವುದನ್ನು ಸಂಚಾರ ಪೊಲೀಸರು ನಿಷೇಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read