HomeKarnatakaಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಬೆಂಗಳೂರಿನ ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸ್ ತಪಾಸಣೆ, ಹೊಸಬರ ಬಗ್ಗೆ...

ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಬೆಂಗಳೂರಿನ ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸ್ ತಪಾಸಣೆ, ಹೊಸಬರ ಬಗ್ಗೆ ಮಾಹಿತಿ ನೀಡಲು ಸೂಚನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನಿ ಸಂಚರಿಸುವ ಮಾರ್ಗಗಳು, ಮೆಟ್ರೋ ರೈಲು ಹಾಗೂ ಕಾರ್ಯಕ್ರಮ ನಡೆಯುವ ವೇದಿಕೆಗಳಲ್ಲಿ ಯಾವುದೇ ರೀತಿಯ ಭದ್ರತಾ ಲೋಪವಾಗದಂತೆ ವಿಶೇಷ ನಿಗಾ ವಹಿಸಲಾಗಿದೆ. ಪ್ರಧಾನಿ ಭೇಟಿಗೆ ಸುಮಾರು 10 ದಿನಗಳ ಮೊದಲೇ ಬೆಂಗಳೂರಿಗೆ ಆಗಮಿಸಿರುವ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ತಂಡ, ಮೋದಿ ಸಂಚರಿಸಲಿರುವ ರಸ್ತೆ ಮಾರ್ಗಗಳು, ಮೆಟ್ರೋ ಪ್ರಯಾಣದ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿರುವ ಬೃಹತ್ ಕಟ್ಟಡಗಳ ಮೇಲೆಯೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೊಸದಾಗಿ ಯಾರಾದರೂ ವಾಸಕ್ಕೆ ಬಂದಿದ್ದರೆ ಅವರ ಬಗ್ಗೆ ಮಾಹಿತಿ ನೀಡುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೆ, ರಸ್ತೆಗಳಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ ನಿರಂತರ ನಿಗಾ ವಹಿಸುವಂತೆ ಎಸ್‌ಪಿಜಿ ಅಧಿಕಾರಿಗಳು ಸೂಚಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಪ್ರಧಾನಿ ಮೋದಿ ಭದ್ರತೆಗೆ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಮೂವರು ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿಗಳು, 20 ಎಸಿಪಿಗಳು, 30 ಇನ್‌ಸ್ಪೆಕ್ಟರ್‌ಗಳು, 100ಕ್ಕೂ ಹೆಚ್ಚು ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ದಕ್ಷಿಣ ಭಾಗದ ಹಲವು ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ ಕೂಡ ಜಾರಿಯಲ್ಲಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರ ದಟ್ಟಣೆ ತಪ್ಪಿಸಲು ಪೊಲೀಸರು ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ತೆರಳಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಚಾಲನೆ ನೀಡಲಿದ್ದಾರೆ.

ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಬೆಂಗಳೂರಿನಲ್ಲಿ ₹15,600 ಕೋಟಿಗೂ ಹೆಚ್ಚಿನ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular