HomeIndiaಇದೇ ಮೊದಲ ಬಾರಿಗೆ RSS ಕಚೇರಿಗೆ ಪ್ರಧಾನಿಯೊಬ್ಬರ ಭೇಟಿ: ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

ಇದೇ ಮೊದಲ ಬಾರಿಗೆ RSS ಕಚೇರಿಗೆ ಪ್ರಧಾನಿಯೊಬ್ಬರ ಭೇಟಿ: ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರದಲ್ಲಿರುವ ಆರ್.ಎಸ್.ಎಸ್. ಮುಖ್ಯ ಕಚೇರಿಗೆ ಭಾನುವಾರ ಭೇಟಿ ನೀಡಲಿದ್ದಾರೆ.

ಪ್ರಧಾನಿಯೊಬ್ಬರು ಆರ್.ಎಸ್.ಎಸ್. ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲಾಗಿದೆ. ಆರ್ ಎಸ್ ಎಸ್ ಕಚೇರಿಯ ಸ್ಮೃತಿ ಮಂದಿರದಲ್ಲಿ ಆರ್.ಎಸ್.ಎಸ್. ಸಂಸ್ಥಾಪಕ ಡಾ.ಹೆಡಗೆವಾರ್ ಹಾಗೂ ಎರಡನೇ ಸರಸಂಘ ಚಾಲಕ ಗುರೂಜಿ ಗೋಳ್ವಾಲ್ಕರ್ ಅವರ ಸ್ಮಾರಕಕ್ಕೆ ಮೋದಿ ಗೌರವ ಸಲ್ಲಿಸಲಿದ್ದಾರೆ. ಆರ್.ಎಸ್.ಎಸ್. ನ ಬಹು ಮುಖ್ಯ ಯುಗಾದಿ ಸಂಭ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಪ್ರಧಾನಿ ಮೋದಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಬೌದ್ಧ ದೀಕ್ಷೆ ಸ್ವೀಕರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಮಾಧವ ನೇತ್ರಾಲಯ ನವೀಕೃತ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular